ಬೆಂಗಳೂರು, ಜ. 10 (DaijiworldNews/AA): ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧ ಬಂಧಿಸಿದ್ದ ಒಟ್ಟು 6 ಮಂದಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ.

ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಾಮೆಂಟ್ ಮಾಡಿ ತಲೆಮರೆಸಿಕೊಂಡಿದ್ದವರಲ್ಲಿ 6 ಜನರನ್ನ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಬಂಧಿತ ಆರೋಪಿಗಳಲ್ಲಿ ಸಾಫ್ಟ್ವೇರ್ ಇಂಜಿನಿಯರ್, ಪೆಟ್ರೋಲ್ ಬಂಕ್ ಮ್ಯಾನೇಜರ್ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳ ವಿರುದ್ಧ 60 ದಿನಗಳಲ್ಲಿ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.