ನವದೆಹಲಿ, ಜೂ. 24 (DaijiworldNews/AA): ಒಂದು ವರ್ಷದವರೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿದ ಆದೇಶವನ್ನು ಮಾರ್ಪಾಡು ಮಾಡುವಂತೆ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ವಕೀಲರ ಮೂಲಕ ಅರ್ಜಿ ಸಲ್ಲಿಸಿರುವ ಅವರು, 'ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ಹೀಗಾಗೀ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಆದೇಶ ಬದಲಿಸಬೇಕು. ಒಂದು ವರ್ಷದೊಳಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ನ್ಯಾಯಲಯ ಹೇಳಿದೆ. ಆದರೆ ಈ ಆದೇಶದಿಂದ ಟ್ರಯಲ್ ಇನ್ನಷ್ಟು ವಿಳಂಬವಾಗಬಹುದು. ಜೊತೆಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ಮಾನವೀಯ ನೆಲೆಗಳಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ' ಎಂದು ಮನವಿ ಮಾಡಿದ್ದಾರೆ.
'ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ದೀರ್ಘಾವಧಿಯ ಬಂಧನವನ್ನು ಕಾಲಕಾಲಕ್ಕೆ ನ್ಯಾಯಾಲಯ ಪರಿಶೀಲಿಸಬೇಕು. ದೀರ್ಘ ಬಂಧನದಿಂದ ತಮ್ಮ ವೃತ್ತಿಜೀವನ, ಜೀವನೋಪಾಯ ಮತ್ತು ಕುಟುಂಬಕ್ಕೆ ತೀವ್ರ ಹಾನಿಯಾಗಿದೆ. ತಾಯಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿದ್ದಾರೆ. ಒಂದು ವರ್ಷ ಜಾಮೀನು ನೀಡದಿರುವ ಆದೇಶ ವ್ಯಾಪಕ ಪರಿಣಾಮ ಬೀರಬಹುದು' ಎಂದು ತಿಳಿಸಿದ್ದಾರೆ.