ಮುಂಬೈ, ಜು.17 (DaijiworldNews/MB) : ಕೊರೊನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಕೊರೊನಾ ವಾರಿಯರ್ಸ್ ಆದ ಪೊಲೀಸರ ನೆರವಿಗೆ ನಿಂತಿದ್ದಾರೆ.
ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಕೆಲಸವೂ ಇಲ್ಲದೇ ತಮ್ಮ ಊರುಗಳಿಗೂ ಮರಳಲಾಗದೆ ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರಿಗೆ ಆಹಾರ ಪೂರೈಕೆ ಮಾಡಿ ತಮ್ಮ ಊರುಗಳಿಗೆ ಮರಳಲು ಸಹಾಯ ಮಾಡಿದ್ದ ನಟ ಸೋನು ಸೂದ್ ಅವರು, ಇದೀಗ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ಖರೀದಿಸಿ ನೀಡಿದ್ದಾರೆ.
ಈ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಟ್ವೀಟ್ ಮಾಡಿದ್ದು, ನಟ ಸೋನು ಸೂದ್ ಅವರು, ನಮ್ಮ ಪೊಲೀಸ್ ಸಿಬ್ಬಂದಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ತಮ್ಮ ಕರ್ತವ್ಯ ಮೆರೆದಿದ್ದಾರೆ. ನಮ್ಮ ಧನ್ಯವಾದಗಳು ಎಂದು ತಿಳಿಸಿದ್ದಾರೆ.