ವಾಷಿಂಗ್ಟನ್, ಆಗಸ್ಟ್ 17, (DaijiworldNews/TA) : ಮುಂಬೈ ದಾಳಿಯ ಕುರಿತಾಗಿ ಅಮೆರಿಕ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂಬುವುದಾಗಿ ಅಮೆರಿಕ ಕೋರ್ಟ್ ತೀರ್ಪು ನೀಡಿದೆ.
ಭಾರತ-ಯುಎಸ್ ಹಸ್ತಾಂತರ ವಿಚಾರದ ಎರಡು ದೇಶಗಳ ನಡುವಿನ ಒಪ್ಪಂದವು ರಾಣಾ ಹಸ್ತಾಂತರಕ್ಕೆ ಅನುಮತಿ ನೀಡುತ್ತದೆ ಎಂದು ನ್ಯಾಯಾಲಯವು ತೀರ್ಪಿನಲ್ಲಿ ಹೇಳಿಕೊಂಡಿದೆ. ಎರಡೂ ದೇಶಗಳ ಈ ತೀರ್ಪಿನಿಂದ ರಾಣಾಗೆ ತೀವ್ರ ಹಿನ್ನಡೆಯಾಗಿದೆ.
ರಾಣಾ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ರಾಣಾ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಭಾರತವು ಸಾಕಷ್ಟು ಸಮರ್ಥ ಪುರಾವೆಗಳನ್ನು ಒದಗಿಸಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಣಾಗೆ ಅವಕಾಶವಿದೆ.