ಪಾರ್ಸಾ, ಆ.22 (DaijiworldNews/TA) : "ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತವು ದೃಢವಾಗಿ ನಂಬುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ.
ಅವರು ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವಾಗ, ಈ ಹೇಳಿಕೆ ನೀಡಿದ್ದಾರೆ. ಮತ್ತು ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕುರಿತು ಪ್ರಸ್ತಾಪಿಸಿದ್ದಾರೆ.
"ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳು ನಮ್ಮೆಲ್ಲರಿಗೂ ಆಳವಾದ ಕಾಳಜಿಯ ವಿಷಯವಾಗಿದೆ" ಎಂದು ಪ್ರಧಾನಿ ಹೇಳಿದ್ದಾರೆ. ದ್ವಿಪಕ್ಷೀಯ ಸಭೆಗಳು ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅನೇಕ ವಿಚಾರಗಳ ಕುರಿತು ಪ್ರಸ್ತಾಪಿಸಿದರು.