ವಾಷಿಂಗ್ಟನ್, ಆ.26(DaijiworldNews/TA): ಅಮೇರಿಕಾದಲ್ಲಿ ಭಾರತೀಯ ಮೂಲದ ಖ್ಯಾತ ವೈದ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾದ ಡಾ. ರಮೇಶ್, ಕ್ರಿಮ್ಸನ್ ನೆಟ್ವರ್ಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಗುಂಪಿನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಲ್ಲಿ ಒಬ್ಬರಾಗಿದ್ದರು ಡಾ. ರಮೇಶ್.
ಶುಕ್ರವಾರ ಅಲಬಾಮಾದ ಟಸ್ಕಲೂಸಾ ಎಂಬ ನಗರದಲ್ಲಿ ಭಾರತೀಯ ಮೂಲದ ವೈದ್ಯರ ಮೇಲೆ ಅಮೆರಿಕದಲ್ಲಿ ಗುಂಡು ಹಾರಿಸಲಾಗಿದೆ. ಗುಂಡು ತಾಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಡಾ. ರಮೇಶ್ ಬಾಬು ಪೆರಮಶೆಟ್ಟಿ ಎಂದು ಗುರುತಿಸಲಾಗಿದೆ.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯವರಾದ ಡಾ ರಮೇಶ್, ಕ್ರಿಮ್ಸನ್ ನೆಟ್ವರ್ಕ್ ಆಗಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ವೈದ್ಯಕೀಯ ಅಧಿಕಾರಿಗಳ ಗುಂಪಿನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಲ್ಲಿ ಒಬ್ಬರು. ಅವರು ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು ಮತ್ತು ಟಸ್ಕಲೂಸಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.