ಇಟಲಿ, ಸೆ.9(DaijiworldNews/AA): ಉಕ್ರೇನ್-ರಷ್ಯಾ ಸಂಘರ್ಷವನ್ನು ಭಾರತ ಕೊನೆಗೊಳಿಸಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಇಟಲಿಯ ಸೆರ್ನೊಬಿಯೊ ನಗರದ ಅಂಬ್ರೊಸೆಟ್ಟಿ ಫೋರಮ್ನಲ್ಲಿ ಶನಿವಾರ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು. ಈ ವೇಳೆ ಉಕ್ರೇನ್ನಲ್ಲಿನ ಸಂಘರ್ಷವನ್ನು ಪರಿಹರಿಸುವಲ್ಲಿ ಭಾರತ ಮತ್ತು ಚೀನಾದಂತಹ ದೇಶಗಳು ಪ್ರಮುಖ ಪಾತ್ರ ವಹಿಸಬಹುದು ಎಂದಿದ್ದಾರೆ.
ಇನ್ನು ಉಕ್ರೇನ್ನಲ್ಲಿನ ಸಂಘರ್ಷವನ್ನು ತಡೆಯುವ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಶನಿವಾರ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುವ ದೇಶಗಳ ಕುರಿತು ಮಾತನಾಡಿದ್ದರು. ಪುಟಿನ್ ಭಾರತ ಮಾತ್ರವಲ್ಲದೆ ಚೀನಾ ಮತ್ತು ಬ್ರೆಜಿಲ್ ಕೂಡ ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.
ಸದ್ಯ ಉಕ್ರೇನ್-ರಷ್ಯಾ ನಡುವಿನ ಯುದ್ಧ ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಇಡೀ ಜಗತ್ತೇ ಭಾರತ ಮತ್ತು ಪ್ರಧಾನಿ ಮೋದಿ ಅವರಿಂದ ಮಾತ್ರ ಈ ಯುದ್ಧವನ್ನು ನಿಲ್ಲಿಸಲು ಸಾಧ್ಯ ಎಂದು ಹೇಳುತ್ತಿದೆ.