ವಾಷಿಂಗ್ಟನ್, ಸೆ.8(DaijiworldNews/AA): ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿದ್ದು, ಅವರನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಸಂಸದರನ್ನು ಸ್ವಾಗತಿಸಿದರು. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಹೆಚ್ಚಿಸುವ ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ವಿಪಕ್ಷ ನಾಯಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು, ಅಮೆರಿಕದ ಡಲ್ಲಾಸ್ನ ಟೆಕ್ಸಾಸ್ನಲ್ಲಿ ಭಾರತೀಯ ಡಯಾಸ್ಪೊರಾ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ನ ಸದಸ್ಯರಿಂದ ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ. ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.