ಬರ್ಲಿನ್, ಸೆ.2೬(DaijiworldNews/AK):ಇಸ್ರೇಲ್ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್ಗಳ ಸ್ಫೋಟದ ನಂತರ ಲೆಬನಾನ್ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ಸೂಚನೆ ಬರುವವರೆಗೂ ಲೆಬನಾನ್ಗೆ ಪ್ರಯಾಣಿಸದಂತೆ ಬೈರುತ್ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ ನೀಡಿದೆ.
ಲೆಬನಾನ್ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಕಾರಣಾಂತರಗಳಿಂದ ಲೆಬನಾನ್ನಲ್ಲೇ ಉಳಿದ ಜನ ತೀವ್ರ ಎಚ್ಚರಿಕೆಯಿಂದ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಬೈರುತ್ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಗೆ ಕರೆ ಮಾಡುವಂತೆ ತಿಳಿಸಲಾಗಿದೆ.