ಲಾಹೋರ್,ಅ. 06(DaijiworldNews/TA):ಪಾಕ್ನಲ್ಲಿ ತಮ್ಮ ಪಕ್ಷದ ಪರವಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರಿಗೆ ಆಹ್ವಾನ ನೀಡಿದ್ದಾರೆ.
ತಮ್ಮ ಹೋರಾಟದಲ್ಲಿ ಭಾಗವಹಿಸುವಂತೆ ಹಾಗೂ ಭಾಷಣ ಮಾಡುವಂತೆ ಆಹ್ವಾನ ನೀಡಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಪ್ರತಿಭಟನೆಗೆ ಭಾರತದ ಸಹಾಯ ಕೇಳಿದ್ದಾರೆ.
ಜೈಶಂಕರ್ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಅವರಿಗೆ ಅಲ್ಲಿ ನೀಡಬೇಕಾದ ಭದ್ರತೆ ಬಗ್ಗೆ ಅಲ್ಲಿನ ಗೃಹ ಹಾಗೂ ರಕ್ಷಣಾ ಸಚಿವಾಲಯಕ್ಕೆ ತಿಳಿಸಲಾಗಿದೆ. ಅವರು ಕೂಡ ಭದ್ರತೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಪಿಟಿಐ ತನ್ನ 72 ವರ್ಷದ ಸಂಸ್ಥಾಪಕನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವುದರ ಹೊರತಾಗಿ ಏರುತ್ತಿರುವ ಹಣದುಬ್ಬರದ ವಿರುದ್ಧ ಸರ್ಕಾರವು ಸಂವಿಧಾನಕ್ಕೆ ಬದ್ಧವಾಗಿರಬೇಕು, ನ್ಯಾಯಾಂಗದ ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಬೇಕು ಎಂದು ಪ್ರತಿಪಾದಿಸುತ್ತಾ ಪ್ರತಿಭಟನೆಗಳನ್ನು ನಡೆಸುತ್ತಿದೆ.