ಇಸ್ರೇಲ್, ಅ.26(DaijiworldNews/AK): ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್ಸ್ಟ್ರೈಕ್ ನಡೆಸಿದೆ.
ಇಸ್ರೇಲ್ ದಾಳಿಯಿಂದ ಇರಾನ್ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ. ಅ.1 ರಂದು ಇರಾನ್ ಕ್ಷಿಪಣಿ ದಾಳಿ ನಡೆಸಿದಾಗ ಪ್ರತಿಕ್ರಿಯೆ ನೀಡುವುದಾಗಿ ಇಸ್ರೇಲ್ ಹೇಳಿತ್ತು. ಅದಕ್ಕೆ ಪೂರಕವಾಗಿ ಈ ಕಾರ್ಯಚರಣೆ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ.
ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.