ಟೆಲ್ ಅವಿವ್,ನ.27(DaijiworldNews/AK): 2023ರ ಅಕ್ಟೋಬರ್ನಿಂದ ನಡೆಯುತ್ತಿರುವ ಇಸ್ರೇಲ್-ಲೆಬನಾನ್ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಇಸ್ರೇಲ್ನ ಭದ್ರತಾ ಕ್ಯಾಬಿನೆಟ್ 10-1 ಮತಗಳಿಂದ ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಕದನ ವಿರಾಮ ಜಾರಿಗೆ ಬರಲಿದೆ.
ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್ , ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ ಕುರಿತು ಮಾತುಕತೆ ನಡೆಸಿದ್ದಾರೆ.
ಇದು 13 ತಿಂಗಳಿನಿಂದ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ದಾರಿ ಮಾಡಿಕೊಟ್ಟಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮಂಗಳವಾರ ಪ್ರಕಟಿಸಿದೆ. ಗಾಝಾದಲ್ಲಿ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದೆ.
ಇಸ್ರೇಲ್ನ ಅನುಮೋದನೆಯ ನಂತರ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಅವರ US ಅಧ್ಯಕ್ಷ ಜೋ ಬಿಡೆನ್ ಜಂಟಿ ಹೇಳಿಕೆಯನ್ನು ನೀಡಿದರು. ಈ ಸಂಘರ್ಷವು ಹಿಂಸಾಚಾರದ ಮತ್ತೊಂದು ಚಕ್ರವಾಗೋದನ್ನ ತಡೆಯಲು ನಿರ್ಧರಿಸಿದ್ದೇವೆ. ಲೆಬನಾನ್ನ ಸಶಸ್ತ್ರ ಪಡೆಗಳನ್ನು ನವೀಕರಿಸಲು ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಬೆಂಬಲಿಸುವ ಪ್ರಯತ್ನಕ್ಕಾಗಿ ಉಭಯ ರಾಷ್ಟ್ರಗಳು ಬದ್ಧವಾಗಿರಬೇಕು ಎಂದು ಹೇಳಿದ್ದಾರೆ.