ಒಟ್ಟಾವಾ, ಡಿ.17(DaijiworldNews/AA): ಖಲಿಸ್ತಾನ ಉಗ್ರ ಸಂಘಟನೆಯ ವಿಚಾರ ಮುಂದಿಟ್ಟುಕೊಂಡು ಭಾರತದ ಜೊತೆಗೆ ಚೇಷ್ಟೆ ಮಾಡುತ್ತಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಶೀಘ್ರವೇ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಟ್ರುಡೋ ರಾಜೀನಾಮೆ ನೀಡಲು ಚಿಂತನೆ ಮಾಡಿದ್ದಾರೆ. ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಉಪಪ್ರಧಾನಿ ಹುದ್ದೆಯೊಂದಿಗೆ ಹಣಕಾಸು ಖಾತೆಯನ್ನು ಹೊಂದಿದ್ದ ಕ್ರಿಸ್ಟಿಯಾ ಫ್ರೀಲ್ಯಾಂಡ್ ಟ್ರುಡೋ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ಸಚಿವರಾಗಿದ್ದರು. ಕಳೆದ ೪ ವರ್ಷಗಳಲ್ಲಿ ಸರ್ಕಾರದಿಂದ ಹೊರಬಂದ 2ನೇ ಹಣಕಾಸು ಸಚಿವೆ ಇವರಾಗಿದ್ದಾರೆ.