ಕುವೈತ್, ,ಡಿ.21(DaijiworldNews/AK): ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ 2 ದಿನಗಳ ಕಾಲ ಕುವೈತ್ ಪ್ರವಾಸ ಕೈಗೊಂಡಿದ್ದಾರೆ. ದ್ವಿಪಕ್ಷೀಯ ಸಂಬಂಧ ಮತ್ತು ಇಂಧನ ಸಹಕಾರ ವೃದ್ಧಿಗಾಗಿ ಮೋದಿ ಕುವೈತ್ಗೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ) ಹೇಳಿದೆ.
ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಈ ಮೂಲಕ 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಕುವೈತ್ನಲ್ಲಿಂದು ನಡೆಯುವ ʻಹಾಲಾ ಮೋದಿ ಮೆಗಾ ಡಯಾಸ್ಪೊರಾ ಕಾರ್ಯಕ್ರಮಕ್ಕೆ ಈಗಾಗಲೇ ವೇದಿಕೆ ಸಿದ್ಧಪಡಿಸಲಾಗಿದೆ. ಸುಮಾರು 5,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಅರಣು ಕುಮಾರ್ ಚಟರ್ಜಿ ಮಾಹಿತಿ ನೀಡಿದ್ದಾರೆ.