ಇಸ್ಲಾಮಾಬಾದ್ ,ಮಾ.06(DaijiworldNews/AK): ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ನಾಲ್ ಪೊಲೀಸ್ ಠಾಣೆ ಅಧಿಕಾರಿ ಬಹಾವಲ್ ಖಾನ್ ಪಿಂದ್ರಾನಿ ಅವರು ಸಾವು-ನೋವುಗಳ ಬಗ್ಗೆ ದೃಢಪಡಿಸಿದ್ದಾರೆ.
ಸ್ಫೋಟಕವನ್ನು ಮೋಟಾರ್ಸೈಕಲ್ಗೆ ಅಳವಡಿಸಲಾಗಿತ್ತು. ಕಾರಿನ ಪಕ್ಕದಲ್ಲಿ ಬೈಕ್ ನಿಲ್ಲಿಸಿದ ನಂತರ ರಿಮೋಟ್ ಮೂಲಕ ಸ್ಫೋಟಿಸಲಾಗಿದೆ.ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.