ವಾಷಿಂಗ್ಟನ್,ಮಾ.08(DaijiworldNews/AK): ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ.

ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ. ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಇದೀಗ ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ. ಅವರು ಈಗ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸುತ್ತಾರೆ ಎಂದು ಹೇಳಿದ್ದಾರೆ.
ಏಪ್ರಿಲ್ 2 ರಿಂದ ದೊಡ್ಡ ಬದಲಾವಣೆ ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ ಜೊತೆಗಿನ ಯೋಜಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶನಿವಾರ ಹೇಳಿದ್ದಾರೆ.