ಡೆನ್ವರ್, ಮಾ.14(DaijiworldNews/TA) : ಗುರುವಾರ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಲ್ಲಾಸ್ಗೆ ತೆರಳುತ್ತಿದ್ದ ಅಮೇರಿಕನ್ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಜನರು ಇದ್ದರು ಎನ್ನಲಾಗಿದೆ.

ಅಮೇರಿಕನ್ ಏರ್ಲೈನ್ಸ್ ನ ಬೋಯಿಂಗ್ 737-800 ವಿಮಾನ ಸಂಖ್ಯೆ 1006, ಕೊಲೊರಾಡೋ ಸ್ಪ್ರಿಂಗ್ಸ್ ನಿಂದ ಹೊರಟು ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ವಿಮಾನವನ್ನು ಡೆನ್ವರ್ ಗೆ ತಿರುಗಿಸಲಾಯಿತು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ. ಲ್ಯಾಂಡ್ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಹೆಚ್ಚಾಗಿದೆ. ಅಲ್ಲದೇ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ವಿಮಾನದಲ್ಲಿದ್ದ 6 ಸಿಬ್ಬಂದಿ ಸೇರಿದಂತೆ, 178 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಎನ್ನಲಾಗಿದೆ.
ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಆದರೆ 12 ಜನರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿನ ಪೋಸ್ಟ್ನಲ್ಲಿ ತಿಳಿಸಿದೆ. ಸ್ಥಳಾಂತರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ವಿಮಾನವು ಲ್ಯಾಂಡಿಂಗ್ ನಂತರ ಗೇಟ್ ಕಡೆಗೆ ಚಲಿಸುತ್ತಿತ್ತು ಮತ್ತು "ಎಂಜಿನ್ ಸಂಬಂಧಿತ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.