ನೇಪಿಟಾವ್/ಬ್ಯಾಂಕಾಕ್, ಮಾ.29 (DaijiworldNews/AA): ಮಯನ್ಮಾರ್ನಲ್ಲಿ ನಿನ್ನೆಯಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಇದೀಗ ಒಟ್ಟು ಸಾವಿನ ಸಂಖ್ಯೆ 700ಕ್ಕೆ ದಾಟಿದೆ. 1,670 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಜಧಾನಿ ನೇಪಿಡಾವ್ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿ ಶೋಧ ಕಾರ್ಯ ಮುಂದುವರಿಸಿವೆ.
ಮ್ಯಾನ್ಮಾರ್ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್ಗೆ ಕಳುಹಿಸಲಾಗುತ್ತಿದೆ.
ಮ್ಯಾನ್ಮಾರ್, ಥಾಯ್ಲೆಂಡ್ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5.16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.