ವಾಷಿಂಗ್ಟನ್,ಏ.19 (DaijiworldNews/AK): ಈ ವರ್ಷದ ಅಂತ್ಯದಲ್ಲಿ ನಾನು ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ವಿಶ್ವದ ಶ್ರೀಮಂತ ಉದ್ಯಮಿ, ಟೆಸ್ಲಾ ಕಂಪನಿಯ ಸಂಸ್ಥಾಪಕ ಎಲೋನ್ ಮಸ್ಕ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಎಲೋನ್ ಮಸ್ಕ್ ಶುಕ್ರವಾರ ದೂರವಾಣಿಯಲ್ಲಿಮಾತನಾಡಿದ ಬಳಿಕ ಮೋದಿ ಅವರು ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಭಾರತ ಮತ್ತು ಅಮೆರಿಕ ಒಡಗೂಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ಗೆ ಪ್ರತಿಕ್ರಿಯಿಸಿದ ಮಸ್ಕ್, ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದು ಗೌರವದ ಸಂಗತಿ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.