ಇಸ್ಲಮಾಬಾದ್, ಮೇ.02(DaijiworldNews/AK):ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸುವ ಭೀತಿ ಉಂಟಾಗಿದೆ. ಇದರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಆಹಾರ ವಸ್ತು ಸಂಗ್ರಹಿಟ್ಟುಕೊಳ್ಳುವಂತೆ ಗಡಿ ಭಾಗದ ಜನತೆಗೆ ಸೂಚನೆ ನೀಡಲಾಗಿದೆ. ನೀಲಂ ಕಣಿವೆಗೆ ತೆರಳದಂತೆ ಪ್ರವಾಸಿಗರಿಗೆ ನಿರ್ದೇಶನ ನೀಡಲಾಗಿದೆ. ಕರಾಚಿ, ಲಾಹೋರ್ ವಾಯುನೆಲೆಗಳು ದಿನದ 8 ತಾಸು ಬಂದ್ ಆಗಲಿದೆ.
ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಆಹಾರವನ್ನು ಸಂಗ್ರಹಿಸಲು ಪಾಕ್ ನಾಗರಿಕರ ಬಳಿ ಮನವಿ ಮಾಡಿದೆ. ಪಿಒಕೆಯಲ್ಲಿರುವ ನಾಗರಿಕರಿಗೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ.
ಮಿಲಿಟರಿ ಉಲ್ಬಣಗೊಳ್ಳುವ ಭೀತಿಯ ನಡುವೆ, ಪಾಕ್ ಆಕ್ರಮಿತ ಕಾಶ್ಮೀರದ ಅಧಿಕಾರಿಗಳು 1,000ಕ್ಕೂ ಹೆಚ್ಚು ಧಾರ್ಮಿಕ ಶಾಲೆಗಳನ್ನು 10 ದಿನಗಳವರೆಗೆ ಮುಚ್ಚಲು ಆದೇಶಿಸಿದ್ದಾರೆ.