ಇಸ್ಲಾಮಾಬಾದ್/ಬೀಜಿಂಗ್, ಮೇ. 05 (DaijiworldNews/AA): ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭಾರತದ ಉತ್ತರಕ್ಕೆ ಪಾಕಿಸ್ತಾನ ತತ್ತರಿಸಿದೆ. ಈ ನಡುವೆ ಪಾಕಿಸ್ತಾನದಲ್ಲಿರುವ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್, ಸಂಕಷ್ಟ ಸಮಯದಲ್ಲಿ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ಅಭಯ ನೀಡಿದ್ದಾರೆ.

ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರನ್ನು ಭೇಟಿಯಾದ ಜೈಡಾಂಗ್, ಭಾರತದೊಂದಿಗೆ ನಡೆಯುತ್ತಿರುವ ಪರಿಸ್ಥಿತಿಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಇದೇ ವೇಳೆ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಖಚಿತಪಡಿಸಿಕೊಳ್ಳಲು ಚೀನಾ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪಾಕ್ನಲ್ಲಿರುವ ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾರತ ತೆಗೆದುಕೊಂಡ ಇತ್ತೀಚಿನ ಕ್ರಮಗಳ ಬಗ್ಗೆ ಆಸಿಫ್ ಅಲಿ ಜರ್ದಾರಿ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದ ಕ್ರಮಗಳು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ಆತಂಕಪಟ್ಟರು.