ಇಸ್ಲಾಮಾಬಾದ್, ಮೇ. 10 (DaijiworldNews/AA): ಸೇನಾ ಮುಖ್ಯಸ್ಥ ಅಸಿಮ್ ಮುನೀರ್ನಿಂದ ಪಾಕಿಸ್ತಾನ ನಾಶವಾಗುತ್ತಿದೆ ಎಂದು ಅಸಿಮ್ ಮುನೀರ್ ವಿರುದ್ಧ ಪಾಕಿಸ್ತಾನದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ತನ್ನ ಮೇಲೆ ದಾಳಿ ನಡೆಸಲು ಮುನೀರ್ ನಿರ್ಧಾರವೇ ಕಾರಣ. ಒಂದು ವೇಳೆ ಇಮ್ರಾನ್ ಖಾನ್ ಈ ಸಂದರ್ಭದಲ್ಲಿ ಇದ್ದಿದ್ದರೆ ಎರಡೂ ದೇಶಗಳ ಮಧ್ಯೆ ಉತ್ತಮ ಸಂಬಂಧ ಇರುತ್ತಿತ್ತು. ಮುನೀರ್ ತನ್ನ ವೈಯಕ್ತಿಕ ಲಾಭಕ್ಕಾಗಿ ಭಾರತದ ವಿರುದ್ಧ ದಾಳಿ ನಡೆಸುತ್ತಿದ್ದಾನೆ. ಕೂಡಲೇ ಬಂಧನದಲ್ಲಿರುವ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡಿ ಎಂದು ಜನರು ಪೋಸ್ಟ್ ಮಾಡುತ್ತಿದ್ದಾರೆ.
ಪಹಲ್ಗಾಮ್ ದಾಳಿಗೂ ಮೊದಲು ಮುನೀರ್, "ಕಾಶ್ಮೀರ ಪಾಕಿಸ್ತಾನದ ಕಂಠನಾಳ. ಅದನ್ನು ನಾವು ಪಡೆಯುತ್ತೇವೆ" ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ.
ಇಸ್ಲಾಮಾಬಾದ್ನಲ್ಲಿ 48 ಗಂಟೆಗಳ ಕಾಲ ಪೆಟ್ರೋಲ್ ಪಂಪ್ಗಳು ಸಂಪೂರ್ಣ ಬಂದ್
ದೇಶದ ರಾಜಧಾನಿ ಇಸ್ಲಾಮಾಬಾದ್ ಆಡಳಿತ ಮುಂದಿನ 48 ಗಂಟೆಗಳ ಕಾಲ ಎಲ್ಲಾ ಪೆಟ್ರೋಲ್ ಪಂಪ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ. ಈ ಅಧಿಕೃತ ಸೂಚನೆಯಲ್ಲಿ ನಿಖರ ಕಾರಣ ಉಲ್ಲೇಖಿಸದೇ, ಎಲ್ಲಾ ಪೆಟ್ರೋಲ್ ಪಂಪ್ಗಳನ್ನು ಕೂಡಲೇ ಮುಚ್ಚಬೇಕೆಂದು ತಿಳಿಸಿದೆ.
ಇದರಿಂದ 48 ಗಂಟೆ ವರೆಗೆ ಇಸ್ಲಾಮಾಬಾದ್ನಲ್ಲಿ ಖಾಸಗಿ ವಾಹನಗಳು, ಸಾರ್ವಜನಿಕ ಸಾರಿಗೆ ಹಾಗೂ ವಾಣಿಜ್ಯ ವಾಹನಗಳಿಗೆ ಇಂಧನ ಲಭ್ಯವಾಗದೇ ಎಲ್ಲಾ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದೆ. ಜೊತೆಗೆ ಈ ಬೆಳವಣಿಗೆ ಪಾಕ್ ಸರ್ಕಾರಕ್ಕೆ ಭಾರೀ ನಷ್ಟ ಉಂಟುಮಾಡಿದೆ ಎಂದು ವರದಿಯಾಗಿದೆ.