ಕಾಬೂಲ್, ಫೆ. 22 (DaijiworldNews/AA): ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಪ್ರದೇಶದ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಪಡೆ ಈ ದಾಳಿ ನಡೆಸಿದೆ. ಅಫ್ಘಾನ್ ಮೂಲದ ಭಯೋತ್ಪಾದಕ ಗುಂಪುಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಇತ್ತೀಚಿನ ಆತ್ಮಹತ್ಯಾ ದಾಳಿಗಳನ್ನು ನಡೆಸುತ್ತಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಫ್ಘಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್, "ನಿನ್ನೆ ರಾತ್ರಿ ಪಾಕ್ ವಾಯುಪಡೆ ನಂಗರ್ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಮ್ಮ ನಾಗರಿಕರ ಮೇಲೆ ಬಾಂಬ್ ದಾಳಿ ನಡೆಸಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಸಾವನ್ನಪ್ಪಿದ್ದಾರೆ" ತಿಳಿಸಿದ್ದಾರೆ.
ಇನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು, "ಕಳೆದ ವಾರ ರಂಜಾನ್ ಆರಂಭವಾದಾಗಿನಿಂದ ಮೂರು ದಾಳಿಗಳನ್ನು ಉಲ್ಲೇಖಿಸಿದ್ದಾರೆ. ಪಾಕಿಸ್ತಾನವು ಗುಪ್ತಚರ ಮಾಹಿತಿ ಆಧಾರಿಸಿ ಪಾಕಿಸ್ತಾನಿ ತಾಲಿಬಾನ್ ಮತ್ತು ಅದರ ಅಂಗಸಂಸ್ಥೆಗಳಿಗೆ ಸೇರಿದ ಏಳು ಭಯೋತ್ಪಾದಕ ಶಿಬಿರಗಳು ಮತ್ತು ಅಡಗುತಾಣಗಳನ್ನು ಗಡಿ ಪ್ರದೇಶದಲ್ಲಿ ದಾಳಿ ನಡೆಸಿದೆ" ಎಂದು ಹೇಳಿದ್ದಾರೆ.