ಪ್ಯಾರಿಸ್, ಜೂ. 18 (DaijiworldNews/AK): ಜಿ7 ಶೃಂಗಸಭೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ರಾಜಧಾನಿ ಪ್ಯಾರಿಸ್ ತಲುಪಿದ್ದಾರೆ. ಪ್ಯಾರಿಸ್ನಲ್ಲಿ ಅವರಿಗೆ ಭಾರತೀಯರಿಂದ ಭವ್ಯವಾದ ಸ್ವಾಗತ ದೊರೆತಿದೆ.

ಈ ವೇಳೆ ಮಾತನಾಡಿದ ಅವರು, ನಮ್ಮ ಗ್ರಹದ ಒಟ್ಟಾರೆ ಪ್ರಗತಿಗೆ ಭಾರತ ಮತ್ತು ಫ್ರಾನ್ಸ್ ನಡುವಿನ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.
ಫ್ರೆಂಚ್ ಕಮ್ಯೂನ್ ಎವಿಯನ್-ಲೆಸ್-ಬೈನ್ಸ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅತಿಥಿ ರಾಷ್ಟ್ರವಾಗಿ ಭಾರತ ಭಾಗವಹಿಸಿತ್ತು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೋದಿ ಪ್ಯಾರಿಸ್ಗೆ ಆಗಮಿಸಿದ್ದಾರೆ. ಪ್ಯಾರಿಸ್ನಲ್ಲಿ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮೇಳವಾದ ‘ವಿವಾಟೆಕ್ 2026’ ನಲ್ಲಿ ಭಾಗವಹಿಸಲಿದ್ದಾರೆ.
ಜಾಗತಿಕ ಸಮೃದ್ಧಿಯನ್ನು ಸಾಧಿಸಲು ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ (ಗ್ಲೋಬಲ್ ಸೌತ್) ನಿಕಟ ಸಂಬಂಧ ಹೊಂದುವುದು ಅಗತ್ಯ ಎಂದು ಮೋದಿ ಒತ್ತಿಹೇಳಿದರು. ಜಿ7 ದೇಶಗಳು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಬಲವನ್ನು ಒಟ್ಟುಗೂಡಿಸಿ ವ್ಯಾಪಾರ ಹಾಗೂ ಸಂಪರ್ಕವನ್ನು ಹೆಚ್ಚಿಸುವ ಹೊಸ ಚೌಕಟ್ಟನ್ನು ಮೋದಿ ಪ್ರಸ್ತಾಪಿಸಿದರು.
. ಪ್ರಸ್ತುತ ಫ್ರಾನ್ಸ್ನಲ್ಲಿ ಸುಮಾರು 1.19 ಲಕ್ಷಕ್ಕೂ ಅಧಿಕ ಭಾರತೀಯರು ವಾಸಿಸುತ್ತಿದ್ದಾರೆ.