ಆಂಟ್ವೆರ್ಪ್, ಜು. 01 (DaijiworldNews/AA): ಬೆಲ್ಜಿಯಂನ ಆಂಟ್ವೆರ್ಪ್ ನಗರದಲ್ಲಿರುವ 10 ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಆಂಟ್ವೆರ್ಪ್ ನ ಲಿಂಕರೋವರ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ 200ಕ್ಕೂ ಹೆಚ್ಚು ಜನರು ವಾಸವಿದ್ದರು. ಈ ಕಟ್ಟಡದ ಎಂಟನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಇತರೆ ಅಂತಸ್ತಿಗೂ ವ್ಯಾಪಿಸಿದೆ.
ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ತುರ್ತು ಸೇವೆಗಳ ತಂಡಗಳು ಸ್ಥಳಕ್ಕೆ ಧಾವಿಸಿವೆ. ನಿವಾಸಿಗಳನ್ನು ಸುರಕ್ಷಿತವಾಗಿ ಹೊರ ಕರೆತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿತ್ತು.