ಕೀವ್,ಜು. 26 (DaijiworldNews/AK): ಉಕ್ರೇನ್ನ ಒಡೆಸಾ ಬಂದರಿನಲ್ಲಿ ನಿನ್ನೆ ರಾತ್ರಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ಕೈವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಎಂಜಿ ಎಜಿಎನ್ ರಾಗ್ನರ್ ಎಂಬ ಹಡಗು ನಾಲ್ವರು ಭಾರತೀಯ ಪ್ರಜೆಗಳನ್ನು ಹೊತ್ತೊಯ್ಯುತ್ತಿತ್ತು. ಅವರಲ್ಲಿ ಇಬ್ಬರು ಸುರಕ್ಷಿತವಾಗಿದ್ದಾರೆ. ನಾಲ್ವರು ಭಾರತೀಯರ ಗುರುತುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಎಕ್ಸ್ ಪೋಸ್ಟ್ನಲ್ಲಿ, ಕಾಣೆಯಾದ ಭಾರತೀಯರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿವೆ ಎಂದು ತಿಳಿಸಿದೆ.
2022ರ ಫೆಬ್ರವರಿಯಲ್ಲಿ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನಿಯನ್ ಬಂದರು ಒಡೆಸಾ ಆಗಾಗ್ಗೆ ಡ್ರೋನ್ ದಾಳಿಗೆ ಒಳಗಾಗುತ್ತಿದೆ.