ಬೀಜಿಂಗ್, ಜು. 26 (DaijiworldNews/AA): ದಕ್ಷಿಣ ಚೀನಾದ ಗುವಾಂಗ್ಡಾಂಗ್ ಪ್ರಾಂತ್ಯಕ್ಕೆ ನೌಲ್ ಚಂಡಮಾರುತ ಅಪ್ಪಳಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಚೀನಾದ ಹಲವಾರು ಪ್ರಾಂತ್ಯಗಳಲ್ಲಿ ಪ್ರಬಲ ಗಾಳಿ ಮತ್ತು ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತದಿಂದಾಗಿ ಹಠಾತ್ ಪ್ರವಾಹ ಉಂಟಾಯಿತು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ತುರ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿರುವುದಾಗಿ ತಿಳಿದುಬಂದಿದೆ.
ಚಂಡಮಾರುತದಿಂದ ಭೂಕುಸಿತ ಉಂಟಾಗಿದ್ದು, ಗುವಾಂಗ್ಡಾಂಗ್ನಾದ್ಯಂತ ಹೈ-ಸ್ಪೀಡ್ ರೈಲು ಸೇವೆಗಳು ಮತ್ತು ವಿಮಾನ ಸೇವೆ ಸ್ಥಗಿತಗೊಂಡಿದೆ. ಗುವಾಂಗ್ಡಾಂಗ್ನಲ್ಲಿ 800,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಚಂಡಮಾರುತದ ಭಯಾನಕ ವೀಡಿಯೋಗಳು ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿವೆ.