ಇಸ್ಲಾಮಾಬಾದ್, ಅ.26(Daijiworld News/SS): ಭಾರತ ಪ್ರಾದೇಶಿಕ ಶಾಂತಿಗೆ ಭಂಗ ತರುವಂತಹ ಹೇಳಿಕೆ ನೀಡುವ ಮೂಲಕ ಯುದ್ಧಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಪಾಕಿಸ್ತಾನ ಸೇನೆ ಆರೋಪಿಸಿದೆ.
ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪಿಒಕೆ ಉಗ್ರರ ನಿಯಂತ್ರಣದಲ್ಲಿರುವ ಪಾಕಿಸ್ತಾನದ ಭಾಗವಾಗಿದೆ ಎಂದು ವರ್ಣಿಸಿದ ಬೆನ್ನಲ್ಲೇ ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರ್ ಅಸಿಫ್ ಘಾಪೂರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪದೇ ಪದೇ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಹೊಸದಾಗಿ ಪ್ರಸ್ತಾಪಿಸಿರುವ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಸ್ಥಾನದ ಮೇಲೆ ಕಣ್ಣಿಟ್ಟು, ಬಿಪಿನ್ ರಾವತ್ ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ ಎಂದು ಘಾಪೂರ್ ದೂರಿದರು. ಆದರೆ, ಪಾಕಿಸ್ತಾನದ ನಿರಾಧಾರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.