ಬ್ಯಾಂಕಾಕ್, ನ.19(Daijiworld News/SS): ಭಯೋತ್ಪಾದಕ ಸುರಕ್ಷಿತ ತಾಣಗಳನ್ನು ನಿರ್ಮೂಲನೆ ಮಾಡಲು ಜಾಗತಿಕ ಸಮುದಾಯ ನೆರವು ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಬ್ಯಾಂಕಾಕ್ನಲ್ಲಿ ನಡೆದ 6 ನೇ ಆಸಿಯಾನ್ ರಕ್ಷಣಾ ಸಚಿವರ ಸಭೆಯ ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈ ಜೋಡಿಸುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಯೋತ್ಪಾದಕ ಸುರಕ್ಷಿತ ತಾಣಗಳನ್ನು ನಿರ್ಮೂಲನೆ ಮಾಡಲು ಮತ್ತು ಅವರ ಜಾಲಗಳನ್ನು, ಮುಖ್ಯವಾಗಿ ಹಣಕಾಸು ನೆರವು ತಡೆಯುವುದರ ಮೂಲಕ ಸುಸ್ಥಿರ ಪ್ರಾದೇಶಿಕ ಭದ್ರತೆ ಕಾಪಾಡಿಕೊಳ್ಳುವಂತೆ ತಿಳಿಸಿದ್ದಾರೆ
ಗಡಿಯಂಚಿನ ಭಯೋತ್ಪಾದನೆ ತುಂಬಾ ಘೋರವಾಗಿದ್ದು, ಕೆಲ ದೇಶಗಳು ಪ್ರಾದೇಶಿಕ ಭದ್ರತೆಯನ್ನು ದುರ್ಬಲಗೊಳಿಸುವ ಉದ್ದೇಶದೊಂದಿಗೆ ತಮ್ಮದೇ ರಾಜಕೀಯ ಗುರಿಗಳನ್ನು ಸಾಧಿಸಲು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವುದು ದುರಂತ ಎಂದು ಹೇಳಿದ್ದಾರೆ.