ಇಸ್ಲಾಮಾಬಾದ್, ನ.20(Daijiworld News/SS): 370ನೇ ವಿಧಿ ರದ್ದತಿ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ ಪತ್ರ ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರಿವನ್ನ ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಪಾಕಿಸ್ತಾನದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರೆಸ್’ಗೆ ಪತ್ರ ಬರೆದಿರುವ ಖುರೇಷಿ, 370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ದೇಶ ಮಧ್ಯ ಪ್ರವೇಶಿಸಬಾರದು ಎಂದು ಭಾರತ ಬಹಳ ಹಿಂದಿನಿಂದಲೂ ಹೇಳುತ್ತಲೇ ಬರುತ್ತಿದೆ. ಆದರೂ, ಈ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಲೇ ಇದೆ.