ವುಹಾನ್, ಜ 26 (Dajiworld News/MB) : ಚೀನಾದಲ್ಲಿ ಕೊರೋನಾ ವೈರಸ್ನಿಂದಾಗಿ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಲ್ಲೇ ಇದ್ದು ಈವರೆಗೆ 56 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ಕೊರೋನಾ ವೈರಸ್ನಿಂದಾಗಿ ಚೀನಾದಲ್ಲಿ 2,000ಕ್ಕೂ ಹೆಚ್ಚು ಜನರು ಬಳಲುತಿದ್ದು ಕನಿಷ್ಠ 688 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಹುಬೆ ಪ್ರಾಂತ್ಯದಲ್ಲಿ 13 ಮಂದಿ ಮೃತಪಟ್ಟಿದ್ದು, ಶಾಂಖೈನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ವೈರಸ್ ಹರಡುವ ಹಿನ್ನಲೆಯಲ್ಲಿ ಅದರ ಲಕ್ಷಣಗಳು ಕಂಡು ಬಂದವರಿಗೆ ಪ್ರತ್ಯೇಕ ವಾರ್ಡ್ನಲ್ಲಿ ಇರಿಸುವುದು ಮಾತ್ರವಲ್ಲದೆ, ವುಹಾನ್ ನಗರದಲ್ಲಿ ತ್ವರಿತವಾಗಿ 1000 ಹಾಸಿಗೆಗಳು ಇರುವ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಹಾಗೆಯೇ 67 ಆಸ್ಪತ್ರೆಗಳಲ್ಲಿ ವಿಶೇಷ ಕೊಠಡಿ ತೆರೆಯಲಾಗಿದೆ. ಇನ್ನೊಂದು 1,300 ಹಾಸಿಗೆಗಳ ಆಸ್ಪತ್ರೆ ಮಾಡಲು ನಿರ್ಧಾರ ಮಾಡಿದ್ದು ಅದು ಫೆ.3 ರ ಒಳಗೆ ಸಂಪೂರ್ಣವಾಗಲಿದೆ ಎಂದು ಹೇಳಲಾಗಿದೆ.