ಮಾಲ್ಡೀವ್ಸ್, ಫೆ.02 (Daijiworld News/PY): ಕೊರೋನಾ ವೈರಸ್ ಪೀಡಿತ ಚೀನಾದ ವುಹಾನ್ನಿಂದ ಮಾಲ್ಡೀವ್ಸ್ ಪ್ರಜೆಗಳನ್ನು ರಕ್ಷಿಸಿದ ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮಹಮದ್ ಸೋಲಿಹ್ ಧನ್ಯವಾದ ತಿಳಿಸಿದ್ದಾರೆ.
ಭಾನುವಾರ ವುಹಾನ್ನಿಂದ ಭಾರತದ ಏರ್ ಇಂಡಿಯಾದ ಬೋಯಿಂಗ್ 747 ವಿಮಾನದಲ್ಲಿ 324 ಮಂದಿಯನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದ್ದು, ಈ ಪೈಕಿ 7 ಮಂದಿ ಮಾಲ್ಡೀವ್ಸ್ ಪ್ರಜೆಗಳಿದ್ದರು.
ಈ ವಿಚಾರವಾಗಿ ಟ್ವೀಟ್ ಮಾಡಿದ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮಹಮದ್ ಸೋಲಿಹ್, ಕರೋನಾ ವೈರಸ್ ಪೀಡಿತ ಚೀನಾದ ವುಹಾನ್ನಲ್ಲಿ ಅಪಾಯಕ್ಕೆ ಸಿಲುಕಿದ್ದ ಮಾಲ್ಡೀವ್ಸ್ ಪ್ರಜೆಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಹೀಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಇಲಾಖೆ ಹಾಗೂ ಭಾರತದ ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಭಾರತದ ಈ ಕಾರ್ಯ ಮಾಲ್ಡೀವ್ಸ್ ಹಾಗೂ ಭಾರತದ ನಡುವಿನ ಸೌಹಾರ್ಧ ಸಂಬಂಧಕ್ಕೆ ಉದಾಹರಣೆಯಾಗಿದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.