ಮಸ್ಕತ್, ಮಾ.18 (DaijiworldNews/PY) : ಓಮನ್ ಅಂತರಾಷ್ಟ್ರೀಯ ವಿಮಾನ ಸಂಸ್ಥೆಯ ಅಧಿಕಾರಿಯೋರ್ವರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿರುವುದರಿಂದ ಆ ವ್ಯಕ್ತಿಯೊಂದಿಗೆ ವ್ಯವಹರಿಸಿದ್ದ ತನ್ನ ಎಲ್ಲಾ ಸಿಬ್ಬಂದಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲು ಸಂಸ್ಥೆ ಆದೇಶಿಸಿದೆ.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಕ್ ಬ್ರೀನ್ ಅವರು ತೀವ್ರವಾದ ಶೀತದಿಂದ ಬಳಲುತ್ತಿದ್ದರು, ಅವರನ್ನು ತಕ್ಷಣವೇ ತಪಾಸಣೆ ಮಾಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ವಿಚಾರ ತಿಳಿದ ತಕ್ಷಣ ಸಂಸ್ಥೆಯ ಅಧಿಕಾರಿಯೊಂದಿಗೆ ವ್ಯವಹರಿಸಿದ್ದ ಎಲ್ಲಾ ಸಿಬ್ಬಂದಿಗೆ 14 ದಿಗಳ ಕಾಲ ಪ್ರತ್ಯೇಕವಾದ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲು ಸಂಸ್ಥೆ ತಿಳಿಸಿದೆ.
ಹಾಗಾಗಿ, ಸಂಸ್ಥೆಯ ವಿಮಾನದಲ್ಲಿ ಪ್ರಯಾಣಿಸುವ ಎಲ್ಲಾ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದೆ. ಸುರಕ್ಷತೆಯ ಕುರಿತಾಗಿ ವಿಮಾನದಲ್ಲಿ ಪ್ರಯಾಣಿಸುವ ಎಲ್ಲಾ ದೇಶಗಳ ಪ್ರಜೆಗಳಿಗೂ ಮಾಹಿತಿ ನೀಡಲಾಗುತ್ತಿದೆ ಎಂಬುದಾಗಿ ಸಂಸ್ಥೆಯೊಂದು ತಿಳಿಸಿದೆ.
ಮಸ್ಕತ್ನಲ್ಲಿ ಓಮನ್ ಏರ್ ಕಚೇರಿ ಹೊಂದಿದ್ದು, ಈ ಸಂಸ್ಥೆಯು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಸೇವೆ ನೀಡುತ್ತಿದೆ.