ಸೋಲ್, ಎ.27 (Daijiworld News/MB) : ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಆಗುತ್ತಿರುವ ಬೆನ್ನಲ್ಲೇ ಕಿಮ್ ಜಾಂಗ್ ಉನ್ ಅವರು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಬಿಲ್ಡರ್ಗಳಿಗೆ ಧನ್ಯವಾದ ಸಲ್ಲಿಸಿ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇಯ್ ಇನ್ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೂನ್ ಚುಂಗ್ ಇನ್ ಅವರು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೀವಂತವಾಗಿದ್ದಾರೆ ಹಾಗೂ ಆರೋಗ್ಯವಾಗಿದ್ದಾರೆ, ಈ ಬಗ್ಗೆ ವದಂತಿಗಳು ಬೇಡ ಎಂದು ಹೇಳಿದ್ದರು.
ಇನ್ನು ಕಿಮ್ ಶಸ್ತ್ರಚಿಕಿತ್ಸೆ ಒಳಗಾದ ನಂತರ ಉತ್ತರ ಕೊರಿಯಾ ಸರ್ಕಾರವು ತಮ್ಮ ನಾಯಕ ಆರೋಗ್ಯವಾಗಿದ್ದಾರೆ. ಬದುಕಿದ್ದಾರೆ ಎಂದು ತಿಳಿಸಿತ್ತು. ಆದರೆ ಶಸ್ತ್ರಚಿಕಿತ್ಸೆ ಒಳಗಾದ ನಂತರ ಸಾರ್ವಜನಿಕವಾಗಿ ಕಿಮ್ ಅವರು ಕಾಣಿಸಿಕೊಳ್ಳದೇ ಇರುವುದರಿಂದ ಇವೆಲ್ಲ ಊಹಾಪೋಹಗಳು ಹುಟ್ಟಿಕೊಂಡಿದೆ.