ಮಾಸ್ಕೊ, ಮೇ 10 (DaijiworldNews/PY) : ರಷ್ಯಾ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯೊಂದರಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಘಟನೆಯ ಸಂದರ್ಭ ಆಸ್ಪತ್ರೆಯಲ್ಲಿ 200 ಮಂದಿ ಇದ್ದರು ಎನ್ನಲಾಗಿದೆ.
ಮೊದಲಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಇದ್ದವರನ್ನು ಸ್ಥಳಾಂತರಿಸಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಿಂದ ಸ್ಥಳಾಂತರ ಮಾಡಲಾಗಿದ್ದ ಸೋಂಕಿರತನ್ನು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗುತ್ತಿದೆ. ಒಟ್ಟು ಸೋಂಕಿತರಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರ ಸಂಖ್ಯೆ ಎಷ್ಟು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಮಾಸ್ಕೊ ಮೇಯರ್ ಸೆರ್ಗೆಯ್ ಸೊಬಯಾನಿನ್ ಹೇಳಿದ್ದಾರೆ.