ಇಸ್ಲಾಮಾಬಾದ್ , ಸೆ.15(DaijiworldNews/HR): ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ತಮ್ಮ ವಿರುದ್ಧದ ಶಿಕ್ಷೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಮತ್ತೆ ನಾಲ್ಕು ತಿಂಗಳ ಕಾಲಾವಕಾಶ ನೀಡುವ ಸುಗ್ರೀವಾಜ್ಞೆಗೆ ಪಾಕಿಸ್ತಾನ ಸಂಸತ್ತು ಅನುಮೋದನೆ ನೀಡಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಈ ಹಿಂದೆ ಮುಖಭಂಗಕ್ಕೀಡಾಗಿದ್ದ ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ರಾಯಭಾರ ಕಚೇರಿಯ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ಮತ್ತು ತಮಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಬೇಕು ಎಂದು ಆದೇಶ ನೀಡಿತ್ತು. ಈ ಆದೇಶದ ಅನ್ವಯ ಪಾಕಿಸ್ತಾನ ಸಂಸತ್ ಇದೀಗ ಜಾಧವ್ ಗೆ ಗಲ್ಲು ಶಿಕ್ಷೆ ಪ್ರಶ್ನಿಸುವ ಅರ್ಜಿ ಸಲ್ಲಿಕೆ ಮಾಡಲು 4 ತಿಂಗಳ ಕಾಲವಕಾಶ ನೀಡಿದೆ.
ಜಾಧವ್ ಪರ ವಾದ ಮಂಡಿಸುವುದಕ್ಕಾಗಿ ಈ ಹಿಂದೆ ವಕೀಲರನ್ನು ನೇಮಕ ಮಾಡಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿತ್ತು. ಅದಾದ ಬೆನ್ನಲ್ಲೇ ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪಾಕಿಸ್ತಾನ ಹೇಳಿತ್ತು. ರಾಜತಾಂತ್ರಿಕ ಮಾರ್ಗದ ಮೂಲಕ ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವಂತೆ ಭಾರತಕ್ಕೆ ಸಂದೇಶ ರವಾನಿಸಲಾಗಿತ್ತು ಎಂದು ಇನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಜಾಹಿದ್ ಹಫೀಜ್ ಚೌಧರಿ ಹೇಳಿದ್ದಾರೆ.