ಟರ್ಕಿ, ನ.02 (DaijiworldNews/HR): ಭೂಕಂಪ ಸಂಭವಿಸಿ ಸಾವಿನ ಸಂಖ್ಯೆ 76ಕ್ಕೆ ಏರಿರುವ ಘಟನೆ ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ನಡೆದಿ ಎಂದು ತುರ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಭೂಕಂಪನದಲ್ಲಿ ಒಟ್ಟು 962 ಜನರು ಗಾಯಗೊಂಡಿದ್ದು, ಅದರಲ್ಲಿ 743 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇನ್ನು ಉಳಿದ 219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ನಿರಾಶ್ರಿತರಿಗಾಗಿ 1,864 ಟೆಂಟ್ಗಳನ್ನು ಸ್ಥಾಪಿಸಲಾಗಿದ್ದು, ಇನ್ನೂ 2,038 ನಿರ್ಮಿಸಲಾಗುತ್ತಿದೆ. ಜೊತೆಗೆ ಭೂಕಂಪದಿಂದಾಗಿ ಕುಸಿದುಬಿದ್ದಿರುವ ಕಟ್ಟಡಗಳ ಅವಶೇಷಗಳಡಿ ಸಿಕ್ಕಿಬಿದ್ದಿದ್ದ 105 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.