ಇಸ್ಲಾಮಾಬಾದ್, ಡಿ.24 (DaijiworldNews/MB) : ''ಪ್ರಸ್ತುತ ಸ್ಥಿತಿಗತಿಯಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ'' ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ.
ಬುಧವಾರ ತನ್ನ ತಾಯ್ನಾಡು ಮುಲ್ತಾನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖುರೇಷಿ, ''ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ಹಿಂಬಾಗಿಲಿನಿಂದ ಅಥವಾ ರಾಜತಾಂತ್ರಿಕ ಮಾತುಕತೆ ನಡೆಸಲು ಸಾಧ್ಯವಿಲ್ಲ. ಸದ್ಯದ ಪರಿಸ್ಥಿತಿ ಮಾತುಕತೆಗೆ ಅನುಕೂಲಕರವಾಗಿಲ್ಲ'' ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆಯೇ ಭಾರತವೂ ತನ್ನ ನಿಲುವನ್ನು ಸ್ಪಷ್ಟವಾಗಿ ಪಾಕಿಸ್ತಾನಕ್ಕೆ ತಿಳಿಸಿದೆ. ''ಪಾಕಿಸ್ತಾನದೊಂದಿಗೆ ಮಾತುಕತೆ ಹಾಗೂ ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆ ಒಟ್ಟಾಗಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ದ ಪಾಕಿಸ್ತಾನ ಕಠಿಣ ಕ್ರಮ ಕೈಗೊಳ್ಳಬೇಕು'' ಎಂದು ಭಾರತ ತಿಳಿಸಿದೆ.
2016ರಲ್ಲಿ ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರ ದಾಳಿ ನಡೆದ ಬಳಿಕ ಭಾರತ ಪಾಕಿಸ್ತಾನ ಸಂಬಂಧ ಇನ್ನಷ್ಟು ಹದಗೆಟ್ಟಿದೆ.