ಮಾಸ್ಕೋ, ಮಾ 24(DaijiworldNews/AA): ಮಾಸ್ಕೋದ ಕನ್ಸರ್ಟ್ ಹಾಲ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಈವರೆಗೆ 150ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದ್ದು, 107 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗೂ ಶೌಚಾಲಯದಲ್ಲಿ 28 ಮಂದಿಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಸಂಬಂಧಿಸಿದಂತೆ 4 ಬಂದೂಕುಧಾರಿಗಳು ಸೇರಿದಂತೆ 11 ಮಂದಿಯನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ. ದಾಳಿಯ ಬಳಿಕ 14 ಮಂದಿಯ ಮೃತ ದೇಹಗಳು ಮೆಟ್ಟಿಲುಗಳ ಮೇಲೆ ಬಿದ್ದಿರುವುದು ಕಂಡುಬಂದಿದೆ.
ಉಗ್ರರ ದಾಳಿ ನಡೆದ 24 ಗಂಟೆಗಳ ಬಳಿಕ ರಷ್ಯಾ ಅಧ್ಯಕ್ಷ ಪುಟಿನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಶತ್ರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾರು ಏನೇ ಮಾಡಿದರೂ ರಷ್ಯಾವನ್ನು ವಿಭಜನೆಗೊಳಿಸಲು ಸಾಧ್ಯವಿಲ್ಲ. ರಷ್ಯಾದ ಭದ್ರತಾ ಮುಖ್ಯಸ್ಥರು ತಮ್ಮ ತಂಡವು ಕಾರಿನಲ್ಲಿ ಪರಾರಿಯಾಗುತ್ತಿದ್ದ 4 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದರು.