ಬೀಜಿಂಗ್ , ಏ 07 (DaijiworldNews/AK):ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇ ನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.
ಭೂಮಿಯ ಮೇಲ್ಮೈಯಿಂದ 24 ಕಿ.ಮೀ (14.91 ಮೈಲುಗಳು) ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಇಎಂ ಎಸ್ ಸಿ ತಿಳಿಸಿದೆ.