ಮಾಲೆ, ಏ. 12 (DaijiworldNews/AA): ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನಿಂದಾಗಿ ಮಾಲ್ಡೀವ್ಸ್ ಗೆ ತೆರಳುವ ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿತ ಕಂಡಿದೆ. ಹೀಗಾಗಿ ಪ್ರವಾಸಿಗರನ್ನು ತನ್ನತ್ತ ಮರಳಿ ಸೆಳೆಯಲು ಭಾರತದಲ್ಲಿ ರೋಡ್ ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೆಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭ ಭಾರತದ ಪ್ರಮುಖ ನಗರಗಳಲ್ಲಿ ರೋಡ್ ಶೋಗಳನ್ನು ನಡೆಸುವ ಬಗ್ಗೆ ಪ್ರಸ್ತಾಪಿಸಲಾಗಿದೆ.
ಮಾಲ್ಡೀವ್ಸ್ ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ರೋಡ್ ಶೋ ನಡೆಸುವುದಾಗಿ ಘೋಷಣೆ ಮಾಡಿದೆ. ಆದರೆ ಭಾರತದ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್ ಶೋ ನಡೆಯಲಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ.