ಇಸ್ಲಾಮಾಬಾದ್, ಜೂ.25(DaijiworldNews/AA): ಧರ್ಮದ ಹೆಸರಿನಲ್ಲಿ ಪಾಕಿಸ್ತಾನದ ಅಲ್ಪಸಂಖ್ಯಾಕರು ಹಿಂಸೆಗೆ ಒಳಗಾಗಿದ್ದಾರೆ. ಅವರನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪಾಕಿಸ್ತಾನದ ರಕ್ಷಣ ಸಚಿವ ಖ್ವಾಜಾ ಆಸಿಫ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಾಕ್ ಸಂಸತ್ತಿನಲ್ಲಿ ಮಾತನಾಡಿದ ಅವರು, ಪಾಕಿಸ್ಥಾನದ ಸಂಸತ್ನಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಪ್ರತಿದಿನ ಅಲ್ಪಸಂಖ್ಯಾಕರನ್ನು ಹತ್ಯೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ಸಣ್ಣ ಪಂಗಡಗಳೂ ಸೇರಿದಂತೆ ಪಾಕಿಸ್ತಾನದಲ್ಲಿ ಯಾವುದೇ ಅಲ್ಪಸಂಖ್ಯಾಕರು ಸುರಕ್ಷಿತವಾಗಿಲ್ಲ. ಇದು ದೇಶಕ್ಕೆ ಮಜುಗರದ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತರು ಧರ್ಮನಿಂದನೆ ಮಾಡದಿದ್ದರೂ, ಅವರ ಮೇಲೆ ಧರ್ಮನಿಂದನೆಯಂತಹ ಆರೋಪ ಹೊರಿಸಿ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿರುವ ಅಲ್ಪ ಸಂಖ್ಯಾತರ ರಕ್ಷಣೆಗೆ ಮಸೂದೆ ರೂಪಿಸಬೇಕಿದೆ ಎಂದು ತಿಳಿಸಿದರು.
ಆದರೆ ಸಂಸತ್ತಿನಲ್ಲಿ ರಕ್ಷಣಾ ಸಚಿವರ ಪ್ರಸ್ತಾವಕ್ಕೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷ ವಿರೋಧಿಸಿದ ಹಿನ್ನೆಲೆ ಯಾವುದೇ ಮಸೂದೆ ರೂಪಿಸುವ ಕುರಿತು ಚರ್ಚೆ ನಡೆಸಲಾಗಲಿಲ್ಲ. ಪಾಕಿಸ್ತಾನದಲ್ಲಿ ಇಸ್ಲಾಂನ ಅಹ್ಮದಿ ಪಂಗಡ, ಹಿಂದೂ, ಸಿಕ್ಖ್, ಕ್ರಿಶ್ಚಿಯನ್ನರು ಅಲ್ಪಸಂಖ್ಯಾಕರಾಗಿದ್ದು, ಇವರೆಲ್ಲರೂ ಸಂಕಷ್ಟದಲ್ಲಿ ಸಿಲುಕಿದ್ದಾರೆ.