ಇಸ್ಲಾಮಾಬಾದ್, ಜೂ.26(DaijiworldNews/AA): ನಾವು ಭಾರತದ ಜೊತೆಗಿದ್ದೇವೆ. ತಮ್ಮ ದೇಶವು ಶಾಶ್ವತ ಹಗೆತನದಲ್ಲಿ ನಂಬಿಕೆ ಹೊಂದಿಲ್ಲ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಕ್ ದಾರ್ ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾತನಾಡಿದ ಅವರು, ಪಾಕಿಸ್ತಾನ ಯಾವಾಗಲೂ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಹೊಂದುವುದರಲ್ಲಿ ಹೆಚ್ಚಿನ ನಂಬಿಕೆ ಹೊಂದಿದೆ. ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಎಂದು ಹೇಳಿದ್ದಾರೆ.
ಭಾರತದೊಂದಿಗಿನ ನಮ್ಮ ಸಂಬಂಧವು ಐತಿಹಾಸಿಕವಾಗಿ ಕಳಪೆಯಾಗಿದೆ. ಆದರೆ ಪಾಕಿಸ್ತಾನವು ಶಾಶ್ವತ ಹಗೆತನವನ್ನು ಬಯಸುವುದಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ ಆಧಾರದ ಮೇಲೆ ನಾವು ಭಾರತದೊಂದಿಗೆ ಉತ್ತಮ ನೆರೆಯ ಸಂಬಂಧಗಳನ್ನು ಬಯಸುತ್ತೇವೆ ಎಂದಿದ್ದಾರೆ.
ದಕ್ಷಿಣ ಏಷ್ಯಾ ಈ ಪ್ರದೇಶವು ಬಡತನ, ನಿರುದ್ಯೋಗ, ಅನಕ್ಷರತೆ, ರೋಗ, ಆಹಾರ ಅಭದ್ರತೆ, ನೀರಿನ ಕೊರತೆ, ನೈಸರ್ಗಿಕ ವಿಕೋಪಗಳು, ಪರಿಸರ ಅವನತಿ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಬೆದರಿಸುವ ಸವಾಲುಗಳಿಂದ ಸುತ್ತುವರೆದಿದೆ. ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ. ಕೆಲವು ಸಂದರ್ಭಗಳಲ್ಲಿ ಸವಾಲುಗಳು ಮತ್ತು ಹಿನ್ನಡೆಗಳ ಹೊರತಾಗಿಯೂ, ಪಾಕಿಸ್ತಾನದ ನಿರ್ಧಾರ ಸ್ಥಿರವಾಗಿರುತ್ತದೆ ಎಂದು ತಿಳಿಸಿದ್ದಾರೆ.