ವಾಷಿಂಗ್ಟನ್ , ,ಜು. 18(DaijiworldNews/AK): ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್ ವೇಗಾಸ್ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ.
ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.
ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ಯುಎಸ್ ಅಧ್ಯಕ್ಷರಿಗೆ ಕೋವಿಡ್ ಇರುವುದನ್ನು ಘೋಷಿಸಿದ್ದಾರೆ.ಅಮೆರಿಕ ಅಧ್ಯಕ್ಷೀಯ ಚುನಾವಣೆ ಹೊತ್ತಿನಲ್ಲಿ ಅಮೆರಿಕ ಅಧ್ಯಕ್ಷರಿಗೆ ಕೋವಿಡ್ ದೃಢಪಟ್ಟಿದೆ.