ಮಂಗಳೂರು, ಆ.16(DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡವನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ದೊರೆಯಲು ಅನುಕೂಲವಾಗಲಿದೆ. ಶಸ್ತ್ರ ಚಿಕಿತ್ಸೆ ಸೇರಿದಂತೆ ಉನ್ನತ ಮಟ್ಟದ ಸೌಲಭ್ಯ ಈ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಆಸ್ಪತ್ರೆ ಗಳಲ್ಲಿ ಉನ್ನತ ಮಟ್ಟದ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ನಂತರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ, ಆಸ್ಪತ್ರೆಯಲ್ಲಿ ಉನ್ನತ ಮಟ್ಟದ ಸಂಪೂರ್ಣ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಕಿರಣಶಾಸ್ತ್ರ ಸೇರಿ ವಿವಿಧ ವಿಭಾಗದ ಉಪಕರಣಗಳನ್ನು ಅಳವಡಿಸಲಾಗಿದೆ. ನೆರೆ ರಾಜ್ಯ ಹಾಗೂ ಜಿಲ್ಲೆಗಳಿಂದ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆಯುತ್ತಾರೆ ಎಂದು ತಿಳಿಸಿದರು.
ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಾತನಾಡಿ, ರಾಜ್ಯದಲ್ಲಿ ಆಸ್ಪತ್ರೆಗಳ ಅಭಿವೃದ್ದಿಗೆ ಎಲ್ಲರು ಪಕ್ಷ ರಹಿತವಾಗಿ ಶ್ರಮಿಸಬೇಕು. ವೈದ್ಯರು ಕೂಡ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಐವನ್ ಡಿಸೋಜ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತಿತರರು ಉಪಸ್ಥಿರಿದ್ದರು.