ಕುಂದಾಪುರ, ಆ.17(DaijiworldNews/AA): ತಾಲೂಕಿನ ಪುರಸಭೆ ಮಾಜಿ ಉಪಾಧ್ಯಕ್ಷ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ, ಕುಂದಾಪುರ ಸಂಗಮ ನಿವಾಸಿ ಜೇಕಬ್ ಡಿ'ಸೋಜಾ (64) ಅವರು ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾದರು.

ಜೇಕಬ್ ಅವರು ಮೂರು ಬಾರಿ ಕುಂದಾಪುರ ಪುರಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಸಹಕಾರಿ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ರೋಸರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಭಾನುವಾರ ಅವರ್ ಲೇಡಿ ಆಫ್ ರೋಸರಿ ಚರ್ಚ್ ನಲ್ಲಿ ಜೇಕಬ್ ಅವರ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಮಧ್ಯಾಹ್ನ 3.30 ಕ್ಕೆ ಮನೆಯಿಂದ ಮೆರವಣಿಗೆಯ ಮೂಲಕ ಚರ್ಚ್ ಗೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.