ಬೆಳ್ತಂಗಡಿ, ಆ.18(DaijiworldNews/AA): ತಾಲೂಕಿನ ಕೊಯ್ಯೂರು ಮಲೆಬೆಟ್ಟು ಎಂಬಲ್ಲಿ ಆಗಸ್ಟ್ 13 ರಂದು ಪಿಕ್ ಅಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಶನಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ ಜೀವ ಉಮೇಶ್ (17) ಎಂದು ಗುರುತಿಸಲಾಗಿದೆ. ಇವರು ತಂದೆ-ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.