ಸುಳ್ಯ, ಆ.18(DaijiworldNews/AA): ಕಾರೊಂದು ಮುಂಭಾಗದಿಂದ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.


ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಲಾರಿಗೆ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಕಲ್ಲುಗುಂಡಿ ನವಮಿ ಸ್ಟೋರ್ ಮುಂಭಾಗದ ಮುಖ್ಯರಸ್ತೆಯಲ್ಲಿ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಲಾರಿಗೆ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಸೇರಿ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿರುವುದಾಗಿ ತಿಳಿದುಬಂದಿದೆ.