ಉಡುಪಿ,ಸೆ.6(DaijiworldNews/AK): ಜಿಲ್ಲೆಯಾದ್ಯಂತ ಸೆಪ್ಟೆಂಬರ 7 ರಂದು ಗಣೇಶ ಹಬ್ಬದ ಆಚರಣೆ ಸಂದರ್ಭಕ್ಕೂ ಮುನ್ನ ಗಣಪತಿ ಪ್ರತಿಷ್ಟಾಪನೆ ಮಾಡುವ ಮೊದಲು ಅನುಮತಿ ಕಡ್ಡಾಯ ಪಡೆಯಬೇಕು.

ಪ್ರತಿಷ್ಠಾಪನೆ ಮಾಡುವ ಸ್ಥಳದ ಕುರಿತು ಬ್ಯಾನರ್ ,ಬಂಟಿಂಗ್ಸ್ ಗಳನ್ನು ಪ್ರಮುಖ ಹಾಗೂ ಇತರೆ ಯಾವುದೇ ಸ್ಥಳಗಳಲ್ಲಿ ಆಳವಡಿಸವ ಮುನ್ನ ಮತ್ತು ಗಣಪತಿ ವಿಗ್ರಹಗಳನ್ನು ತರುವ ಮತ್ತು ವಿಸರ್ಜನಾ ಕಾಲಕ್ಕೆ ನಡೆಸುವ ಮೆರವಣಿಗೆಗಳ ಮಾರ್ಗ ಸಂಬಂಧ ಅನುಮತಿಗೆ ಪೊಲೀಸ್ ಇಲಾಖೆಯ ಸಂಬಂಧಪಟ್ಟ ಠಾಣಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರ(ಎನ್.ಓ.ಸಿ)ವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ