ಕಾಸರಗೋಡು, ಸೆ.8(DaijiworldNews/AA): ಕನ್ಯಾ ಮರಿಯಮ್ಮ ಅವರ ಜನ್ಮದಿನವಾದ ಮೊಂತಿ ಫೆಸ್ಟ್ (ತೆನೆ ಹಬ್ಬ)ನ್ನು ಕಯ್ಯಾರು ಕ್ರಿಸ್ತ ರಾಜ ದೇವಾಲಯದಲ್ಲಿ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.





ಕಯ್ಯಾರು ಕ್ರಿಸ್ತ ರಾಜ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಬಲಿ ಪೂಜೆ ನೆರವೇರಿತು. ವಾಮಂಜೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಫಾ. ವಿಲ್ಫ್ರೇಡ್ ಪ್ರಕಾಶ್ ಡಿಸೋಜ ಬಲಿ ಪೂಜೆ ನೆರವೇರಿಸಿದರು. ಕಯ್ಯಾರ್ ಕ್ರಿಸ್ತರಾಜ ಇಗರ್ಜಿಯ ಧರ್ಮಗುರು ಫಾ. ವಿಶಾಲ್ ಮೋನಿಸ್ ವಿಧಿ ವಿಧಾನಕ್ಕೆ ನೇತೃತ್ವ ನೀಡಿದರು.
ಕರಾವಳಿಯಲ್ಲಿ ಪ್ರಕೃತಿ ಮಾತೆಯನ್ನು ವಿಶಿಷ್ಟ ರೀತಿಯಲ್ಲಿ ವಂದಿಸಲಾಗುತ್ತದೆ. ಕೊಂಕಣಿ ಕೆಥೋಲಿಕರು ಇದನ್ನು 'ಮೊಂತಿ ಫೆಸ್ಟ್' ಆಗಿ ಆಚರಿಸರಿಸುತ್ತಾರೆ. ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸ ತೆನೆಯ ಆಶೀರ್ವಚನ ಮತ್ತು ವಿತರಣೆ, ಧರ್ಮ ಗುರುಗಳಿಂದ ಹಬ್ಬದ ಸಂದೇಶ, ಹಬ್ಬದ ಶುಭಾಶಯ ವಿನಿಮಯ, ಸಿಹಿ ತಿಂಡಿ ಮತ್ತು ಕಬ್ಬು ವಿತರಣೆ ಹಾಗೂ ಬಳಿಕ ಮನೆಗಳಲ್ಲಿ ಕೌಟುಂಬಿಕವಾಗಿ ಹಬ್ಬದ ಭೋಜನ ಕಾರ್ಯಕ್ರಮ ವಿಶೇಷತೆಯಾಗಿದೆ